ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು

(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ.

ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಡಿಸಿಪಿಗಳಾದ ವಿನಯ್ ಗಾಂವ್ಕರ್ ಹಾಗೂ ಹರಿರಾಮ್ ಶಂಕರ್ ಅವರ ನೇತೃತ್ವದಲ್ಲಿ 100ಕ್ಕೂ ಅಧಿಕ ಮಂದಿ ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.

 

ವಶಕ್ಕೆ ಪಡೆದವರಲ್ಲಿ ಸಾಕಷ್ಟು ಮಂದಿ ಮದ್ಯದ ನಶೆಯಲ್ಲಿದ್ದು, ಅವರಲ್ಲಿ ಕ್ರಿಮಿನಲ್ ಹಿನ್ನೆಲೆ ಇದೆಯೇ ಎಂದು ತನಿಖೆ ನಡೆಸಿ ಆ ಬಳಿಕ ಅವರ ಪೋಷಕರನ್ನು ಪತ್ತೆಹಚ್ಚಿ ಅವರ ಸುಪರ್ದಿಗೆ ನೀಡಲಾಗಿದೆ. ಈ ಪ್ರಕ್ರಿಯೆಯಲ್ಲಿ 10-12 ಮಂದಿ ಮಂಗಳಮುಖಿಯರೂ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group