ಸುಳ್ಯ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 04. ಅಪರಿಚಿತ ವಾಹನವೊಂದು ಢಿಕ್ಕು ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಅರಂತೋಡಿನಲ್ಲಿ ನಡೆದಿದೆ.


ಮೃತರನ್ನು ಬಿಳಿಯಾರಿನ ರಾಘವ ಎಂಬವರ ಪತ್ನಿ ಅಮ್ಮಣ್ಣಿ(೫೮) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಇವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ. ಈ ಕುರೊತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  Pin-up Casino Giriş Azərbaycanda Rəsmi Say

error: Content is protected !!
Scroll to Top