(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ನಾದಿನಿಯ ಮೇಲೆ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಬಶೀರ್ ಎಂದು ಗುರುತಿಸಲಾಗಿದೆ. ಈತನ ವಿಚಾರಣೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ. ಆಕೆಯನ್ನು ಬಾವನೇ ಅತ್ಯಾಚಾರಗೈದಿದ್ದಲ್ಲದೇ ಆಕೆಯ ನಗ್ನ ಫೋಟೊಗಳನ್ನು ಸೆರೆಹಿಡಿದು ಬೆದರಿಕೆ ಒಡ್ಡುತ್ತಿದ್ದ ಎಂದು ಆರೋಪಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.