ರಂಗಸ್ಥಳದಲ್ಲೇ ಪ್ರಾಣಬಿಟ್ಟ ಯಕ್ಷಗಾನ ಕಲಾವಿದ ➤ ಮಂದಾರ್ತಿ ಮೇಳದ ಸಾಧು ಕೊಠಾರಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಜ.05. ಯಕ್ಷಗಾನ ಕಲಾವಿದರೋರ್ವರು ಹೃದಯಾಘಾತದಿಂದ ರಂಗಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ಬ್ರಹ್ಮಾವರದಲ್ಲಿ ಮಂಗಳವಾರದಂದು ನಡೆದಿದೆ.

ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಯವರು ಮಂಗಳವಾರ ಬೆಳಗ್ಗಿನ ಜಾವ ಬ್ರಹ್ಮಾವರದ ಶಿರಿಯಾರ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎಂಬಲ್ಲಿ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ಹೃದಯ ನೋವಿನಿಂದ ತೀವ್ರ ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು.

Also Read  ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು

error: Content is protected !!
Scroll to Top