(ನ್ಯೂಸ್ ಕಡಬ) newskadaba.com ಕಡಬ, ಅ.13. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಹ್ಯುಂಡೈ ಐ20 ಕಾರೊಂದು ಚರಂಡಿಗಿಳಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಘಟನೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿದೆ.