ಗುರುವಾಯನೆಕೆರೆ: ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಗುರುವಾಯನಕೆರೆ, ಜ. 05. ಇಂದು ಬೆಳಗ್ಗೆ ಗುರುವಾಯನಕೆರೆಯಲ್ಲಿ ಅಪರಿಚಿತ ಮೃತದೇಹವೊಂದು ತೇಲುತ್ತಿದ್ದುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಮೃತ ಯುವಕ ಧರಿಸಿದ್ದ ಬಟ್ಟೆಯಲ್ಲಿ ಚೀಟಿಯೊಂದು ದೊರೆತಿದ್ದು, ಉಡುಪಿ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!
Scroll to Top