ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06 ಲಂಚ ಪಡೆಯುತ್ತಿದ್ದ ಮಂಗಳೂರು ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

 

ಬಂಧಿತನ್ನು ಮಂಗಳೂರು ಎಸ್‌ಡಿಎ ಸಿಬ್ಬಂದಿ ರಫೀಕ್ ಅಬ್ದುಲ್(42) ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 40 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಸಂತ್ರಸ್ತ ರಫೀಕ್ ಅವರಿಗೆ 40 ಸಾವಿರ ರೂ. ಲಂಚ ನೀಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಬಂಧಿಸಿಸಿ ನಗದನ್ನು ವಶಕ್ಕೆ ಪಡೆದಿದ್ದಾರೆ.

Also Read  ಪುತ್ತೂರು: ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ

error: Content is protected !!
Scroll to Top