ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್



(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06: ಲೋ ಬಿಪಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬಿಡುಗಡೆಯಾಗಿದ್ದಾರೆ.ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು, ಲೋ ಶುಗರ್ನಿಂದ ಅಸ್ವಸ್ಥಗಿದ್ದರು.





ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ನಗರದ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಚಿವರು  ಎರಡು ದಿನದ ಚಿಕಿತ್ಸೆಯ ಬಳಿಕ ಈಗ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಕೆಲವು ದಿನಗಳ ಕಾಲ ಡಿವಿಎಸ್​ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.






 

error: Content is protected !!
Scroll to Top