ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಪರ ಘೋಷಣೆಯನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಸಿ.ಎಪ್.ಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಇತ್ತೀಚೆಗೆ ಉಜಿರೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ನಡುವೆ  ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟಿಸಲಾಯಿತು.

ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಪಾಂಡವರಕಲ್ಲು ಸಂದೇಶ ಭಾಷಣ ನೀಡುವುದರ ಮೂಲಕ ದೇಶದ್ರೋಹಿಗಳನ್ನು ಬಂದಿಸಲು ಒತ್ತಾಯಿಸಿದರು. ಪ್ರತಿಭಟನೆಕಾರರು ಬಿಜೆಪಿ ವಿರುದ್ಧ ಆಕ್ರೋಶದೊಂದಿಗೆ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಸಫ್ವಾನ್ ಸುನ್ನತ್ಕೆರೆ, ಜಿಲ್ಲಾ ಸಮಿತಿ ಸದಸ್ಯರಾದ ಶಹೀರ್, ನಾಸಿರ್ ಹಾಗು ಇಮ್ರಾನ್ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಸ್ವಾಗತಿಸಿ ನಿರೂಪಿಸಿದರು.

Scroll to Top