ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ



(ನ್ಯೂಸ್ ಕಡಬ) newskadaba.com ಬೆಂಗಳೂರು , ಜ.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.





 

ರಾಜ್ಯದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಜನವರಿ 7 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ಮತ್ತು ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.






 

error: Content is protected !!
Scroll to Top