ಪಂಜ: ಜ. 09ರಂದು ಬಿಜೆಪಿ ಪ್ರತಿಜ್ಞಾ ಸಮಾವೇಶ

(ನ್ಯೂಸ್ ಕಡಬ) newskadaba.com ಪಂಜ, ಜ. 06. ಕಳೆದ ಗ್ರಾ.ಪಂ. ಚುನಾವಣೆಯಲ್ಲಿ ಬೆಜೆಪಿ ಬೆಂಬಿಲತರಾಗಿ ಗೆಲುವು ಸಾಧಿಸಿದ ಜನಪ್ರತಿನಿಧಿಗಳು ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ಸಾಕಾರಗೊಳಿಸುವ ಉದ್ದೇಶದಿಂದ ಪ್ರತಿಜ್ಞಾ ಸಮಾವೇಶವು ಜನವರಿ ಒಂಬತ್ತರಂದು ಪಂಜಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ಎಸ್. ಅಂಗಾರ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Scroll to Top