(ನ್ಯೂಸ್ ಕಡಬ) newskadaba.com ಜ. 06. 690 ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಎಕ್ಸಿಕ್ಯುಟಿವ್) ಹುದ್ದೆಗಳನ್ನು ಭರ್ತಿ ಮಾಡಲು ಸಿಐಎಸ್‌ಎಫ್ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ:
ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಆಗಸ್ಟ್ 1,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಎಕ್ಸಿಕ್ಯುಟಿವ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.cisf.gov.in/cisfeng/ ಗೆ ಬೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 5, 2021ರೊಳಗೆ ತಲುಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ.