ಕಾಂಗ್ರೆಸ್ ಗೆ ಮತ್ತೆ ಆಘಾತ ➤ ಪ್ರಭಾವಿ ಕಾಂಗ್ರೆಸ್ ನಾಯಕ ಜೆಡಿಎಸ್ ಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 07. ಕಾಂಗ್ರೆಸ್ ಪಕ್ಷಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು, ಕಾಂಗ್ರೆಸ್ ನಾಯಕ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದಾಗಿ ಘೋಷಿಸಿಕೊಂಡಿದ್ದಾರೆ.

ಬುಧವಾರದಂದು ಬೆಂಗಳೂರಿನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಖಚಿತಪಡಿಸಿದ್ದ ಸಿ.ಎಂ.ಇಬ್ರಾಹಿಂ, ಇಂದು ಬೆಳಿಗ್ಗೆ ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಮೊದಲು ಜನತಾ ದಳದಲ್ಲಿದ್ದ ಇಬ್ರಾಹಿಂ ತದನಂತರ ಕಾಂಗ್ರಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸಿದ್ಧರಾಮಯ್ಯರ ಆಪ್ತರಾಗಿದ್ದ ಇವರು ಕೆಲಕಾಲ ಕಾಂಗ್ರೆಸ್ ಪಕ್ಷದಲ್ಲಿ ತಟಸ್ಥರಾಗಿರುವುದನ್ನು ಮನಗಂಡು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಭೇಟಿಯಾಗಿ ಪಕ್ಷಕ್ಕೆ ಆಹ್ವಾನಿಸಿದ್ದರು. ಇದೀಗ ಮತ್ತೆ ಜೆಡಿಎಸ್ ಸೇರಿ ಪಕ್ಷದ ರಾಜ್ಯಾಧ್ಯಕ್ಷರಾಗಲಿದ್ದಾರೆ ಎನ್ನುವ ಮಾತು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

Also Read  ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

error: Content is protected !!
Scroll to Top