ತಡರಾತ್ರಿ ಹೆದ್ದಾರಿ ಬದಿ ಮದ್ಯ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್ ➤ ಪೊಲೀಸ್ ಆಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರು ಮಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ಹೆದ್ದಾರಿ ಬದಿಯಲ್ಲಿ ತಡರಾತ್ರಿ ಪಾರ್ಟಿ ಮಾಡುತ್ತಿದ್ದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರು ನಾಲ್ಕು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿರುವ ಶಶಿ ಕುಮಾರ್ ಅವರು ತಡರಾತ್ರಿ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಡರಾತ್ರಿ ವಿನಾಃಕಾರಣ ಸುತ್ತಾಡುವವರ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದಾರೆ. ಬುಧವಾರ ತಡರಾತ್ರಿ ಅವರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಬಸ್‌ ನಿಲ್ದಾಣದಲ್ಲಿ ಆರು ಮಂದಿ ಮದ್ಯ ಸೇವಿಸಿ ಪಾರ್ಟಿ ಮಾಡುತ್ತಿರುವುದನ್ನು ಗಮನಿಸಿದ  ಆಯುಕ್ತರು ಅವರನ್ನು ವಶಕ್ಕೆ ಪಡೆದುಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಗಂಡಿಬಾಗಿಲು ಮದ್ರಸ ಎಸ್.ಕೆ.ಎಸ್.ಬಿ.ವಿ. ಮಹಾಸಭೆ ► ಅಧ್ಯಕ್ಷರಾಗಿ ಫಝಲ್, ಕಾರ್ಯದರ್ಶಿಯಾಗಿ ಮಹಮ್ಮದ್ ಸುಹೈಲ್ ಆಯ್ಕೆ

error: Content is protected !!
Scroll to Top