ರೌಡಿ ಶೀಟರ್ ಬಂಧಿಸಲು ಪೊಲೀಸರಿಂದ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಹದನೈದಕ್ಕೂ ಅಧಿಕ ಪ್ರಕರಣಗಳ ಆರೋಪಿ ರೌಡಿ ಶೀಟರ್ ಓರ್ವನನ್ನು ಬಂಧಿಸಲು ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಆರೋಪಿ ಕಾರ್ತಿಕ್ ಎಂಬಾತನನ್ನು ಬಂಧಿಸಲೆಂದು ತೆರಳಿದ್ದ ವೇಳೆ ಆತ ಪೊಲೀಸರಿಗೆ ಹಲ್ಲೆ ನಡೆಸಿದ್ದು, ಪರಿಣಾಮ ಆತ್ಮರಕ್ಷಣೆಗೋಸ್ಕರ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಯ ಕಾಲಿಗೆ ಗುಂಡು ತಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top