15 ದಿನಗಳಲ್ಲಿ ಮರಳು ಪರವಾನಗಿ ಹಾಗೂ ಅಕ್ರಮ ಗಣಿಗಾರಿಕೆ ಪತ್ತೆಗೆ 196 ಸಿಸಿ ಟಿವಿ ಅಳವಡಿಕೆ ➤ ಸಚಿವ ಸಿ.ಸಿ ಪಾಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹದನೈದು ದಿನಗಳ ಒಳಗೆ ಮರಳು ತೆಗೆಯಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಭೂ ವಿಜ್ಞಾನ ಖಾತೆಯ ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ.


ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಲಾದಂತಹ 30 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅನುಮತಿ ನೀಡಲಾಗುವುದು, ಸರಕಾರಿ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯ ಬಗ್ಗೆ ತನಿಖೆಗೆ ಸೂಚಿಸಿದ್ದು, ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು. ಗಡಿ ಪ್ರದೇಶಗಳ ಅಕ್ರಮ ಮರಲು ಸಾಗಾಟವನ್ನು ಪತ್ತೆಹಚ್ಚಲು 196 ಸಿ.ಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮೊದಲಾದವರು ಉಪಸ್ಥಿತರಿದ್ದರು.

Also Read  ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ

error: Content is protected !!
Scroll to Top