(ನ್ಯೂಸ್ ಕಡಬ) newskadaba.com ಕಲ್ಮಂಜ, ಜ. 08. ಇಲ್ಲಿನ ನಿಡಿಗಲ್ ಎಂಬಲ್ಲಿ ಎರಡು ಹದ್ದುಗಳ ಕೊಳೆತ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಮೃತದೇಹಗಳು ಸಂಪೂರ್ಣವಾಗಿ ಕೊಳೆತ ಕಾರಣ ಪರೀಕ್ಷೆಗೆ ಕಳಿಸಲು ಅಸಾಧ್ಯವಾಗಿದ್ದು, ಇತ್ತೀಚಿನ ದಿನಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಳ್ಳುತ್ತಿರುವುದರಿಂದ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.