ಮಂಗಳೂರು: ಕಡಲತೀರದಲ್ಲಿ ಮದ್ಯ ಸೇವಿಸುತ್ತಿದ್ದ70 ಕ್ಕೂ ಅಧಿಕ ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ಕಡಲತೀರಗಳಲ್ಲಿ  ತೊಂದರೆ ಮಾಡುತ್ತಿದ್ದ 70 ಕ್ಕೂ ಅಧಿಕ ಮಂದಿಯನ್ನು ನಗರ ಪೊಲೀಸರು  ವಶಕ್ಕೆ ಪಡೆದಿದ್ದಾರೆ.

ನಾಲ್ಕು ಪ್ರಮುಖ ಕಡಲತೀರಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅನೇಕ ಜನರು ಮದ್ಯ ಸೇವಿಸಿ ಉಪಟಳ ಮಾಡುತ್ತಿರುವುದನ್ನು ಸ್ಥಳೀಯರ ದೂರುಗಳ ಆಧಾರದ ಮೇಲೆ ಸಬ್ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, 70 ಕ್ಕೂ ಹೆಚ್ಚು ವ್ಯಕ್ತಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಈ ಪೈಕಿ ಐದಾರು ಜನರನ್ನು ಹೊರತುಪಡಿಸಿ, ಉಳಿದೆಲ್ಲರೂ ಮದ್ಯ ಸೇವಿಸುತ್ತಿದ್ದರು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 17 ಬೈಕ್‌ಗಳು ಮತ್ತು 7 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

Also Read  ಕಾಣಿಯೂರು: ಬಿಜೆಪಿ ಮಹಾಸಂಪರ್ಕ ಅಭಿಯಾನ

 

error: Content is protected !!
Scroll to Top