ರಾಜ್ಯದಾದ್ಯಂತ ಸೋಮವಾರದಿಂದ ಕೋವಿಡ್ ಲಸಿಕೆ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08. ಸೋಮವಾರದಿಂದ ರಾಜ್ಯದಾದ್ಯಂತ  ಕೊರೊನಾ ಲಸಿಕೆ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

 

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ನಾಳೆ ಲಸಿಕೆ ಬರಲಿದ್ದು, ಸೋಮವಾರದಿಂದ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ 13.90 ಲಕ್ಷ ಡೋಸ್ ಬರಲಿದ್ದು, ಇಂದು 263 ಸ್ಥಳಗಳಲ್ಲಿ ಡ್ರೈರನ್ ಪ್ರಾರಂಭವಾಗಲಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಸಿದ್ಧತೆ ಮಾಡಲಾಗಿದೆ ಎಂದು ಹೇಳಿದರು.

Also Read  ಸರ್ವೆ: ಮನೆಯ ಕಿಟಕಿ ಮುರಿದು ನಗ-ನಗದು ಕಳವು

error: Content is protected !!
Scroll to Top