ಬೆಳ್ತಂಗಡಿ: ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಸ್ಥಾನವನ್ನು ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಫೆಬ್ರವರಿ 5 ರೊಳಗೆ ಅರ್ಜಿ  ಆಹ್ವಾನಿಸಲಾಗಿದೆ.


ಗ್ರಂಥಾಲಯ ಮೇಲ್ವಿಚಾರಕರ ಸ್ಥಾನವು ಪರಿಶಿಷ್ಟ ಜಾತಿ (ಮಹಿಳಾ ಅಭ್ಯರ್ಥಿ)ಗೆ ಮೀಸಲಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:0824-2441905 ಸಂಪರ್ಕಿಸಬಹುದು ಎಂದು ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ವಿಟ್ಲ: ಪದವಿ ಕಾಲೇಜು ವಿದ್ಯಾರ್ಥಿನಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

error: Content is protected !!
Scroll to Top