(ನ್ಯೂಸ್ ಕಡಬ) newskadaba.com ಕಡಬ, ಜ. 09. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಕಡಬ ತಾ.ಪಂ.ಮಾಜಿ ಸದಸ್ಯ ಫಝಲ್ ಕೋಡಿಂಬಾಳ ಅವರನ್ನು ನೇಮಕಗೊಳಿಸಿ ಅದೇಶ ಹೊರಡಿಸಲಾಗಿದೆ.
ಎನ್. ಎಸ್.ಯು.ಐ ಮೂಲಕ ರಾಜಕೀಯ ಪ್ರವೇಶಿಸಿ ಸತತ ಮೂರು ಬಾರಿ ಕಡಬ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿರುವ ಇವರು, ಕಡಬ ಗ್ರಾ.ಪಂ. ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕಳೆದ ಬಾರಿ ಕಡಬ ತಾ.ಪಂ. ಸದಸ್ಯರಾಗಿ, ಬಳಿಕ ಕಡಬ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದಾಗ ತಾಲೂಕು ಪಂಚಾಯತ್ ಸದಸ್ಯ ಸ್ಥಾನ ಕಳೆದುಕೊಂಡಿದ್ದರು. ಮಂಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಎಲ್ಲರ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸಮಾಜ ಸೇವೆಯಲ್ಲೂ ತೊಡಗಿಕೊಂಡು ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ.