ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.14. ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ನೀಡಲಾಗಿರುವ ಉಚಿತ ವೈಫೈ ಸೇವೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು.

ಈಗಾಗಲೇ ಕೆಲ ಕಡೆ ಪ್ರಾಯೋಗಿಕವಾಗಿ ವೈಫೈ ಸೇವೆಯನ್ನು ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಒದಗಿಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಯಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಎಚ್.ಎಂ. ರೇವಣ್ಣ, ಕೆಪಿಐಟಿ ಕಂಪನಿಗೆ ವೈಫೈ ಸೇವೆ ಕಲ್ಪಿಸಲು ಟೆಂಡರ್ ನೀಡಿದ್ದು, 200 ಬಸ್‌ಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಮಾರ್ಚ್ ತಿಂಗಳಿನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಈ ಸೇವೆ ಲಭ್ಯವಾಗಲಿದೆ ಎಂದರು.

error: Content is protected !!