ಬಂಟ್ವಾಳ: ಅಕ್ರಮ ಗಣಿಗಾರಿಕೆಗೆ ಜಿಲ್ಲಾಧಿಕಾರಿಗಳ ದಿಢೀರ್ ದಾಳಿ ➤ ಯಂತ್ರಗಳ ವಶ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 09. ಬೆಂಜನಪದವು ಎಂಬಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡವು ಯಂತ್ರಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.





ಈ ಮೊದಲು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರಾದರೂ ಗಣಿಗಾರಿಕೆ ಮುಂದುವರಿಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರಿಂದ ದೂರು ದಾಖಲಿಸಿದ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಹಾಗೂ ತಾಲೂಕು ತಹಶೀಲ್ದಾರ್ ರಶ್ಮಿಎಸ್. ಆರ್ ಅವರು ದಿಢೀರ್ ದಾಳಿ ನಡೆಸಿ ಗಣಿಗಾರಿಕೆಯಲ್ಲಿ ತೊಡಗಿದ್ದ ಎರಡು ಟಿಪ್ಪರ್, ಒಂದು ಹಿಟಾಚಿ, ಎರಡು ಕಲ್ಲು ಕತ್ತರಿಸುವ ಯಂತ್ರ ಹಾಗೂ ಮೂರು ಟಿಲ್ಲರ್ ಗಳನ್ನು ವಶಕ್ಕೆ ಪಡೆಯಲಾಗಿದೆ.






error: Content is protected !!
Scroll to Top