ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಮೂವರ ದುರ್ಮರಣ



(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ. 10. ಹುಂಡೈ ಕಾರು ಮತ್ತು ಇಕೋ ಸ್ಪೋರ್ಟ್ಸ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ತರೀಕೆರೆ ತಾಲೂಕಿನ ರಂಗೇನಹಳ್ಳಿಯಲ್ಲಿ ನಡೆದಿದೆ.






ಮೃತಪಟ್ಟವರನ್ನು ಅನಿಲ್ (35), ಸುಜಿತಾ (30) ಹಾಗೂ ನಾಗೇಂದ್ರ (26) ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಹುಂಡೈ ಕಾರು ಹಾಗೂ ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರು ರಂಗೇನಹಳ್ಳಿ ಬಳಿ ಮುಖಾಮುಖಿ ಡಿಕ್ಕಿಯಾಗಿವೆ. ಈ ಕುರಿತು ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top