ವಿಟ್ಲ: ಕಾಲು ಜಾರಿಗೆ ಕೆರೆಗೆ ಬಿದ್ದು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜ. 11. ತೋಟದಲ್ಲಿ ಇತರ ಮಕ್ಕಳ ಜೊತೆ ಆಟ ಆಡುತ್ತಿದ್ದ ವೇಳೆ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ನಡೆದಿದೆ.

 


ಮೃತ ಬಾಲಕಿಯನ್ನು ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎ ಅವರ ಪುತ್ರಿ ಸರಪುನ್ನಿಸಾ (೪) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳ ಜೊತೆ ಈಕೆ ಅಬ್ಬಾಸ್‌ ಬಾಕಿಮಾರು ಎಂಬವರ ತೋಟಕ್ಕೆ ಆಟ ಆಡಲು ತೆರಳಿದ್ದು, ಈ ವೇಳೆ ಸರಪುನ್ನಿಸಾ ತೋಟದ ಮದ್ಯದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾಳೆ. ಈ ಬಗ್ಗೆ ರಸೀದ್‌ ಹಾಗೂ ಬದ್ರುದ್ದೀನ್‌ ಅವರು ಓಡಿಕೊಂಡು ಬಂದು ಮನೆಯಲ್ಲಿ ವಿಷಯ ತಿಳಿಸಿದ್ದಾರೆ.

Also Read  ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು

ಮನೆಮಂದಿ ತೋಟದ ಮದ್ಯದಲ್ಲಿದ್ದ ಕೆರೆಯ ಬಳಿಗೆ ಹೋದಾಗ ಮಗಳು ನೀರಿನಲ್ಲಿ ಮುಳುಗಿರುವುದನ್ನು ಕಂಡು ಆಕೆಯನ್ನು ನೀರಿನಿಂದ ಹೊರಗೆ ತೆಗೆದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್‌ ನಲ್ಲಿ ಕರೆದುಕೊಂಡು ಹೋದಾಗ ವೈದ್ಯಾದಿಕಾರಿಯವರು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top