ನೂಜಿಬಾಳ್ತಿಲ: ಒರುಂಬಾಲು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

 (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜ.11. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಒರುಂಬಾಲು ಉಮಾಮಹೇಶ್ವರ ದೇವಸ್ಥಾನದಲ್ಲಿ ರವಿವಾರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಗಣಹೋಮ ಕಾರ್ಯಗಳು ಕ್ಷೇತ್ರದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೆಶ ತಂತ್ರಿಗಳ ನೇತೃತ್ವದಲ್ಲಿ ನೆರವೇರಿತು.

ಶನಿವಾರ ಊರ ಭಕ್ತಾಧಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ರವಿವಾರ ಬೆಳಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯ ವರಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ ನಡೆದು ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆದು ಬಳಿಕ ಮಹಾಪೂಜೆ ಪ್ರಸಾದ ವಿತರಿಸಿ, ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಆಡಳಿತ ಮೊಕ್ತೇಸರರು, ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group