ಕಾಸರಗೋಡು: ಸೀಮೆಎಣ್ಣೆ ಸೇವಿಸಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಸೀಮೆಎಣ್ಣೆ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಮೃತ ಮಗುವನ್ನು ಋತಿಕ್ (1) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದ ಮಗು ಗೊತ್ತಿಲ್ಲದೆ ಬಾಟಲಿಯಲ್ಲಿದ್ದ ಸೀಮೆಎಣ್ಣೆ ಸೇವಿಸಿದ್ದರಿಂದ ಅಸ್ವಸ್ಥವಾಗಿ ಬಿದ್ದಿದ್ದರಿಂದ ತಕ್ಷಣವೇ ಮಗುವನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ಕೊಂಡೊಯ್ದು ಬಳಿಕ ಡಾಕ್ಟರ್ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.

Scroll to Top