ಗುತ್ತಿಗಾರು: ಗ್ರಾಮಭಾರತ ತಂಡದ ಸದಸ್ಯರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಜ. 11. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಒಂದನೇ ವಾರ್ಡ್ ನಿಂದ ಗೆಲುವು ಸಾಧಿಸಿದ ಗ್ರಾಮಭಾರತ ತಂಡದ ಸದಸ್ಯರು ರವಿವಾರದಂದು ಬಳ್ಳಕ ಪ್ರದೇಶದ ಜನರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ನೂತನವಾದ ಆಯ್ಕೆಯಾದ ಗ್ರಾ.ಪಂ. ಸದಸ್ಯರು ಈ ಜನರ ಸಮಸ್ಯೆ ಹಾಗೂ ಅಭಿವೃದ್ದಿ ಕಾರ್ಯಗಳನ್ನು ಹಂತ ಹಂತವಾಗಿ ಅನಿಷ್ಠಾನಗೊಳಿಸಲು ಎಲ್ಲರ ಸಹಕಾರದೊಂದಿಗೆ ಪ್ರಯತ್ನಿಸುವುದಾಗಿ ತಿಳಿಸಿದರು. ಈ ಪ್ರದೇಶದ ಜನರಿಗೆ ಕುಡಿಯುವ ನೀರಿನ ಸಮಸ್ಯೆ, ಬಸ್ ಸಮಸ್ಯೆ ನೆಟ್ವರ್ಕ್ ಸಮಸ್ಯೆ ಮೊದಲಾದವುಗಳನ್ನು ಈಡೇರಿಸುವಂತೆ ಒತ್ತಾಯಿಸಿದರು‌. ಈ ಸಂದರ್ಭ ಗ್ರಾ.ಪಂ. ಸದಸ್ಯರಾದ ಎಂ.ಕೆ ಶಾರದಾ, ಲತಾ ಕುಮಾರಿ ಹಾಗೂ ವಸಂತ ಮೊಗ್ರ ಉಪಸ್ಥಿತರಿದ್ದರು.

Also Read  'ನಿಪಾಹ್ ವೈರಸ್': ದಕ್ಷಿಣ ಕನ್ನಡದಾದ್ಯಂತ ಹೈ ಅಲೆರ್ಟ್ ► ದ.ಕ.ದಲ್ಲಿ ಯಾವುದೇ ಪ್ರಕರಣ ದೃಢಪಟ್ಟಿಲ್ಲ: ಯು.ಟಿ.ಖಾದರ್

error: Content is protected !!
Scroll to Top