ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 11. ಭಾರತೀಯ ಸೇನೆಗೆ ಸಂಬಂಧಿಸಿದ ಅತೀಸೂಕ್ಷ್ಮ ವಿಷಯಗಳನ್ನು ಪಾಕಿಸ್ತಾನದ ಗುಪ್ತಚರ ಇಲಾಖೆಗೆ ತಲುಪಿಸುತ್ತಿದ್ದ ಎನ್ನುವ ಮಾಹಿತಿಯ ಮೇರೆಗೆ ಸಿಐಡಿ ಅಧಿಕಾರಿಗಳು ರಾಜಸ್ಥಾನದ ಜೈಸಾಲ್ಮೆರ್ ನಿವಾಸಿ ಸತ್ಯನಾರಾಯಣ್ ಪಲಿವಾಲ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಈತನನ್ನು ವಿಚಾರಣೆಗೊಳಪಡಿಸಿದಾಗ ಗುಪ್ತಚರ ಇಲಾಖೆಯೊಂದಿಗೆ ಭಾರತೀಯ ಸೇನಾ ಪಡೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Scroll to Top