(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 11. ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರಿನ ಜಡ್ಕಲ್ ಗ್ರಾಮದ ಹಾಲ್ಕಲ್ ಚಿಕ್ಕಪೇಟೆ ಎಂಬಲ್ಲಿ ನಡೆದಿದೆ.
ಮೃತರನ್ನು ವೆಂಕಟೇಶ್ ಕಿಣಿ(62) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.