ಬಂಟ್ವಾಳ: ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ತಾಲೂಕಿನ ಮಾರ್ನಬೈಲು ಸಮೀಪ ಪೆಲತ್ತಕಟ್ಟೆ ಎಂಬಲ್ಲಿ ಸೋಮವಾರದಂದು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಬೊಳ್ಳಾಯಿ ನಿವಾಸಿ ಇಮ್ರಾನ್(22) ಹಾಗೂ ಮುಬಶ್ಶಿರ್ (12) ಎಂದು ಗುರುತಿಸಲಾಗಿದೆ. ಮೂಲತಃ ಕಾಸರಗೋಡು ನಿವಾಸಿಯಾಗಿರುವ ಇಮ್ರಾನ್ ತನ್ನ ಸಂಬಂಧಿ ಹುಡುಗ ಮುಬಶ್ಶಿರ್ ಜೊತೆ ಡಿಯೋ ವಾಹನದಲ್ಲಿ ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆ ಎಂಬಲ್ಲಿ ಎರಡು ಆಕ್ಟಿವಾ ವಾಹನಗಳ ನಡುವೆ ಸರಣ ಅಪಘಾತ ಸಂಭವಿಸಿದ್ದು, ಇಬ್ಬರಿಗೂ ಗಂಭೀರ ಗಾಯಗಳಾಗಿದ್ದವು. ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರು ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ರಾಜ್ಯದಲ್ಲಿ ಮೋದಿ ಸುನಾಮಿ ಸೃಷ್ಟಿಯಾಗಿದೆ ➤ ಸಿಎಂ ಬೊಮ್ಮಾಯಿ..!       

error: Content is protected !!
Scroll to Top