(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸುಳ್ಯ ಶಾಸಕ ಎಸ್.ಅಂಗಾರರವರು ಬುಧವಾರ ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಎಸ್.ಅಂಗಾರರವರು ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ನಾರಾಯಣ ಕೇಕಡ್ಕ, ಕಾಂಟ್ರಾಕ್ಟರ್ ಎನ್.ಕೆ.ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
Also Read ಐವಾನ್ ಡಿಸೋಜಾ ಸಂವಿಧಾನ ವಿರೋಧಿ ಹೇಳಿಕೆ ಆರೋಪ - ದೂರು ಸ್ವೀಕರಿಸದ ಬರ್ಕೆ ಠಾಣೆಯೆದುರು ಬಿಜೆಪಿ ಪ್ರತಿಭಟನೆ