ಉಳ್ಳಾಲ: ಅಕ್ರಮ ಗೋಸಾಗಾಟ ➤ ತಡೆಹಿಡಿದ ಹಿಂದೂ ಸಂಘಟನೆ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13. ಹಿಂದೂಪರ ಸಂಘಟನೆ ಕಾರ್ಯಕರ್ತರು ಅಕ್ರಮ ಜಾನುವಾರ ಸಾಗಾಟವನ್ನು ತಡೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.

 

6 ಹಸುಗಳು ಹಾಗೂ ಒಂದು ಕರುವನ್ನು ಕೋಟೆಕಾರು ಡೈರಿಯಿಂದ ಬಾಕ್ರಬೈಲು ಡೈರಿಗೆ ಅಕ್ರಮವಾಗಿ ಗೋಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಗೋವು ಸಾಗಾಟಗಾರರು ಗೋವುಗಳನ್ನು ಸಾಕುವ ಉದ್ದೇಶದಿಂದ ಕೊಂಡೊಯ್ಯುತ್ತಿದ್ದೇವೆ ಎಂದು ಹೇಳಿದ್ದು, ಇನ್ನು ಗೋಸಾಗಾಟಕ್ಕೆ ಸೂಕ್ತ ದಾಖಲೆಗಳಿಲ್ಲದ ಹಿನ್ನೆಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಆನ್​ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್​​ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ

 

error: Content is protected !!
Scroll to Top