ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಪ್ರಗತಿಪರ ಚಿಂತಕಿ, ವಿಚಾರವಾದಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಆರೋಪಿಗಳ ರೇಖಾಚಿತ್ರವನ್ನು ವಿಶೇಷ ತನಿಖಾ ತಂಡ ಶನಿವಾರದಂದು ಬಿಡುಗಡೆಗೊಳಿಸಿದೆ.

ನಗರದ ಪ್ಯಾಲೇಸ್ ರಸ್ತೆಯಲ್ಲಿರುವ ಸಿಐಡಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್.ಐ.ಟಿ. ಮುಖ್ಯಸ್ಥ ಬಿ.ಕೆ.ಸಿಂಗ್, ತನಿಖಾಧಿಕಾರಿ ಎಂ.ಎನ್. ಅನುಚೇತ್ ಅವರು ಗೌರಿ ಹಂತಕರ ಶಂಕಿತ ರೇಖಾಚಿತ್ರವನ್ನು ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆಗೊಳಿಸಿದರು.

ತನಿಖಾ ತಂಡವು ಇಲ್ಲಿಯವರೆಗಿನ ತನಿಖೆಯಲ್ಲಿ ಲಭಿಸಿರುವ ಮಾಹಿತಿಯ ಆಧಾರದಲ್ಲಿ ಈ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದೆ. ರೇಖಾಚಿತ್ರದಲ್ಲಿರುವವರ ಬಗ್ಗೆ ಹಾಗೂ ಈ ಸಂಬಂಧದ ಸಿಸಿಟಿವಿ ದೃಶ್ಯಾವಳಿಯಲ್ಲಿರುವವರ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು 9480800202, ವಾಟ್ಸಾಪ್ ಸಂ.: 9480800304, 9480801701 ಅಥವಾ ಇಮೇಲ್: sit.glankesh@ksp.gov.in, ಅನ್ನು ಸಂಪರ್ಕಿಸಬಹುದಾಗಿದ್ದು, ಮಾಹಿತಿ ನೀಡುವವರ ವಿವರವನ್ನು ಗುಪ್ತವಾಗಿ ಇಡಲಾಗುವುದು ಎಂದು ಎಸ್.ಐ.ಟಿ. ಮುಖ್ಯಸ್ಥ ಬಿ.ಕೆ.ಸಿಂಗ್ ತಿಳಿಸಿದ್ದಾರೆ.

error: Content is protected !!
Scroll to Top