ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿದ ಬೈಕ್ ಸವಾರ…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿ, ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಪಣೋಲಿಬೈಲು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅತಿ ವೇಗದಿಂದ ಚಲಿಸುತ್ತಿದ್ದು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರ ಗಾಳಿಯಲ್ಲಿ ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದು, ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಕೇಂದ್ರ ಸರಕಾರಿ ಉದ್ಯೋಗ - ಉಚಿತ ಪರೀಕ್ಷಾ ಪೂರ್ವ ತರಬೇತಿ

error: Content is protected !!