ಉಡುಪಿ: ರಾಡ್ ಹಿಡಿದು ಬಸ್ ಸಿಬ್ಬಂದಿಗಳ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಉಡುಪಿ, ಜ. 13. ಪ್ರಯಾಣಿಕರನ್ನು ಬಸ್ ಗೆ ಹತ್ತಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ರಾಡ್ ಹಿಡಿದು ಖಾಸಗಿ ಬಸ್ ಸಿಬ್ಬಂದಿಗಳು ಜಗಳವಾಡಿರುವ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ.

ಕೊಹಿನೂರ್ ಬಸ್ ಚಾಲಕ ಸಫಿಯುಲ್ಲಾ ಹಾಗೂ ಎ.ಕೆ.ಎಂ.ಎಸ್.ಎಸ್ ಚಾಲಕ ಇರ್ಷಾದ್ ಹಾಗೂ ನಿರ್ವಾಹಕ ಪವನ್ ಶೆಟ್ಟಿ ನಡುವೆ ಗಲಾಟೆ ನಡೆದಿದೆ. ಎರಡೂ ಬಸ್ ಸಿಬ್ಬಂದಿಗಳು ಅಜಾಗರೂಕತೆ ಹಾಗೂ ಅತೀ ವೇಗದಿಂದ ಚಾಲನೆ ನಡೆಸುತ್ತಿದ್ದು, ಪ್ರಯಾಣಿಕರನ್ನು ಹತ್ತಿಸುವ ವಿಚಾರದಲ್ಲಿ ಪರಸ್ಪರ ರಾಡ್ ಹಿಡಿದು ಜಗಳವಾಡಿದ್ದಾರೆ. ಇದೀಗ ಜಗಳದ ವೀಡಿಯೋ ವೈರಲ್ ಆಗಿದ್ದು, ಬಸ್ ನಲ್ಲಿ ಪ್ರಯಾಣಿಕರಿದ್ದ ಸಂದರ್ಭದಲ್ಲೇ ಗೂಂಡಾವರ್ತನೆ ತೋರಿರುವ ಸಿಬ್ಬಂದಿಗಳ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪೊಲೀಸ್ ಇಲಾಖೆ ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Also Read  ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ➤ ಆತಂಕದಲ್ಲಿ ಗಡಿ ಭಾಗವಾದ ಪುತ್ತೂರು, ಸುಳ್ಯದ ಜನತೆ

error: Content is protected !!
Scroll to Top