ಶಾಸಕ ಎಸ್.ಅಂಗಾರರು ಸಚಿವರಾಗಿ ಪ್ರಮಾಣ ಸ್ವೀಕರಿಸುವ ಹಿನ್ನೆಲೆ ➤ ಇಂದು ಸಂಜೆ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಕಡಬದಲ್ಲಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜ.13. ಸುಳ್ಯ ಶಾಸಕ ಎಸ್.ಅಂಗಾರರವರು ಇಂದು ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಕಡಬದಲ್ಲಿ ಹರ್ಷಾಚರಣೆ ನಡೆಯಲಿದೆ.

ಸುಳ್ಯದ ಇತಿಹಾಸದಲ್ಲಿ ಕ್ಷೇತ್ರದ ಶಾಸಕರಿಗೆ ಪ್ರಥಮ ಬಾರಿಗೆ ಸಚಿವ ಸ್ಥಾನ ಸಿಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಡಬ ಮಹಾಶಕ್ತಿ ಕೇಂದ್ರದ ವತಿಯಿಂದ ಕಡಬ ಪೇಟೆಯ ಪಂಚಾಯತ್ ವಾಣಿಜ್ಯ ಸಂಕೀರ್ಣದ ಬಳಿ ಸಂಭ್ರಮಾಚರಣೆ ಆಯೋಜಿಸಲಾಗಿದೆ‌.

Scroll to Top