ಶಿರಾಡಿ: ತುಳು ಚಿತ್ರನಟ ರೂಪೇಶ್ ಶೆಟ್ಟಿಯವರ ಕಾರು ಅಪಘಾತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.13. ತುಳು ಚಿತ್ರನಟ ರೂಪೇಶ್ ಶೆಟ್ಟಿಯವರ ಟೊಯೋಟಾ ಫಾರ್ಚ್ಯೂನರ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನಡುವೆ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ.

ಕಾರ್ಯಕ್ರಮದ ನಿಮಿತ್ತ ತನ್ನ ಗೆಳೆಯರ ಜೊತೆ ಬೆಂಗಳೂರಿಗೆ ತೆರಳುತ್ತಿದ್ದ ರೂಪೇಶ್‌ ಶೆಟ್ಟಿಯವರು ಸಂಚರಿಸುತ್ತಿದ್ದ ಕಾರು ಶಿರಾಡಿ ಘಾಟಿಯಲ್ಲಿ ಬುಧವಾರ ಸಂಜೆ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ರೂಪೇಶ್ ಶೆಟ್ಟಿ ಹಾಗೂ ಸ್ನೇಹಿತರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Scroll to Top