ಕೊರೋನಾ ಹಿನ್ನೆಲೆ ಸ್ಥಗಿತಗೊಂಡಿದ್ದ ಅಂಗನವಾಡಿ ಕೇಂದ್ರಗಳನ್ನು ಮತ್ತೆ ತೆರೆಯುವಂತೆ ಸುಪ್ರೀಂ ಕೋರ್ಟ್ ಸೂಚನೆ…!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 14. ಜ. 31ರ ಹೊತ್ತಿಗೆ ದೇಶದಾದ್ಯಂತ ವಿವಿಧ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆಯನ್ನು ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ತೀರ್ಮಾನ ಕೈಗೊಳ್ಳುವಂತೆ ಆದೇಶ ನೀಡಿದೆ. ಕೊರೋನಾ ಹಿನ್ನೆಲೆ ಸ್ಥಗಿತಗೊಂಡಿದ್ದ ಅಂಗನವಾಡಿಗಳು ಇನ್ನೂ ಆರಂಭಗೊಳ್ಳದ ಕಾರಣ ಅಂಗನವಾಡಿ ಕೇಂದ್ರಗಳನ್ನು ಮತ್ತೆ ತೆರೆದು ಮಕ್ಕಳನ್ನು ಚಟುವಟಿಕೆಗಳಲ್ಲಿ ತೊಡಗಿಸುವ ಅವಶ್ಯಕತೆ ಇದೆ ಎಂದು ಹೇಳಿದೆ.

Also Read  ಸೆಪ್ಟೆಂಬರ್ ತಿಂಗಳಲ್ಲಿ 15 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ...!

error: Content is protected !!
Scroll to Top