(ನ್ಯೂಸ್ ಕಡಬ) newskadaba.com ಮಂಗಳೂರು, ಜ. 14. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಮಯ ಹಾಗೂ ನಿಯಂತ್ರಣ) 2011 ಮತ್ತು ನಿಯಾಮಾವಳಿ 2012ರ ಅನ್ವಯ ಕೊಳವೆ ಬಾವಿ ಕೊರೆಯುವ ರಿಗ್ ಯಂತ್ರದ ಮಾಲಕರು ಕಡ್ಡಾಯವಾಗಿ ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ನೋಂದಣಿ (7A) ಹೊಂದಿರಬೇಕಾಗುತ್ತದೆ. ಕೊಳವೆ ಬಾವಿ ಕೊರೆಸುವವರು (ಸರಕಾರಿ/ಖಾಸಗಿ) ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ‘7A’ ಹೊಂದಿರುವ ರಿಗ್ ಯಂತ್ರದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೊಳವೆ ಬಾವಿ ಕೊರೆಸಬೇಕು. ತಪ್ಪಿದ್ದಲ್ಲಿ ಇಲಾಖಾ ನಿಯಾಮಾನುಸಾರ ಕ್ರಮ ಜರಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಛೇರಿ, ಅಂತರ್ಜಲ ನಿರ್ದೇಶನಾಲಯ, ಜಿಲ್ಲಾ ಪಂಚಾಯತ್ ಕಟ್ಟಡ ಅಶೋಕನಗರ, ಮಂಗಳೂರು ಇವರನ್ನು ಸಂಪರ್ಕಿಸುವಂತೆ ಅಂತರ್ಜಲ ಕಚೇರಿಯ ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.