(ನ್ಯೂಸ್ ಕಡಬ) newskadaba.com ಮಂಗಳೂರು, ಅ.15. ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿಗಳು ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಲಾಯಿಸುವಷ್ಟೇ ಅಪರಾಧ ಅವರಿಗೆ ವಾಹನ ಕೊಡುವ ಪೋಷಕರದ್ದಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಬಿ ಸಿ ರೋಡಿನ ರೋಟರಿ ಭವನದಲ್ಲಿ ಶನಿವಾರ ಸಂಜೆ ಕಾಲೇಜು ಮುಖ್ಯಸ್ಥರಿಗೆ ನಡೆದ ಸಭೆಯಲ್ಲಿ ಮಾತನಾಡಿ, ಕೆಲವು ಅಪ್ರಾಪ್ತ ಬಾಲಕರು ಎಲ್ಲೆಂದರಲ್ಲಿ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಿ ದುರಂತವನ್ನು ಎಳೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅಪ್ರಾಪ್ತ ಹಾಗೂ ಚಾಲನಾ ಪರವಾನಿಗೆ ಇಲ್ಲದ ವಿದ್ಯಾರ್ಥಿಗಳಿಗೆ ವಾಹನ ಒದಗಿಸುವವರ ವಿರುದ್ದ ಮುಂದಿನ ದಿನಗಳಲ್ಲಿ ಪೊಲೀಸ್ ಕಾರ್ಯಾಚರಣೆ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ಕಾಲೇಜು ಆವರಣದೊಳಗೆ ನಿಲ್ಲಿಸುವ ವಾಹನಗಳ ತಪಾಸಣೆಗೂ ಕಾಲೇಜು ಆಡಳಿತ ಮಂಡಳಿ ಪೊಲೀಸರೊಂದಿಗೆ ಸಹಕರಿಸಬೇಕು ಎಂದರು.