(ನ್ಯೂಸ್ ಕಡಬ) newskadaba.com ಮಂಗಳೂರು, ಜ. 14. ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿಕಲಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್ ಹಾಗೂ ಇನ್ನಿತರ ಸಾಧನಗಳನ್ನು ಒಳಗೊಂಡ ಬ್ರೈಲ್ ಕಿಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅಂಧ ವಿದ್ಯಾರ್ಥಿಗಳು ವಿಕಲಚೇತನತೆಯ ಪ್ರಮಾಣ ಶೇ.40 ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಹಾಗೂ ನಂತರದ ಉನ್ನತ ಶಿಕ್ಷಣದ ವ್ಯಾಸಂಗ ಪ್ರಮಾಣ ಪತ್ರ, ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆದ ವಾಸಸ್ಥಳ ದೃಢೀಕರಣ, ವಿದ್ಯಾರ್ಥಿಗಳು ಬೇರೆ ಯಾವುದೇ ಮೂಲಗಳಿಂದ ಇದೇ ರೀತಿಯ ಸೌಲಭ್ಯವನ್ನು ಪಡೆದಿರುವುದಿಲ್ಲವೆಂದು ದೃಢೀಕರಣ ಹಾಗೂ ಸಂಬಂಧಪಟ್ಟ ಶಾಲಾ ಕಾಲೇಜುಗಳ ಮುಖ್ಯಸ್ಥರಿಂದ ಶಿಕ್ಷಣ ಪಡೆಯುತ್ತಿರುವ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು. ಅರ್ಹ ವಿದ್ಯಾರ್ಥಿಗಳು ಅರ್ಜಿಗಳನ್ನು ಜನವರಿ 27 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಅಶೋಕನಗರ ಅಂಚೆ, ಕೊಟ್ಟಾರ, ಮಂಗಳೂರು ದೂ.ಸಂ. 0824-2458173 ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.