ಉಳ್ಳಾಲ: ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 14. ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘತಕ್ಕೆ ಒಳಗಾಗಿರುವ ಘಟನೆ ರಾ.ಹೆ. 66ರ ಕಲ್ಲಾಪು ಎಂಬಲ್ಲಿ ನಡೆದಿದೆ.

ಹೃದಯಾಘಾತಕ್ಕೊಳಗಾದವರನ್ನು ಪುತ್ತೂರು ಮೂಲದ ಅಭಿಷೇಕ್ (43) ಎನ್ನಲಾಗಿದೆ‌. ಇವರು ಕುಟುಂಬ ಸಮೇತ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯರೊಬ್ಬರು ಇವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಗಿದ್ದು, ಸಂಚಾರಿ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Also Read  ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

error: Content is protected !!
Scroll to Top