ಬೆಳ್ತಂಗಡಿ: ಆಟೋ ರಿಕ್ಷಾ – ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ➤ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.15. ಆಟೋ ರಿಕ್ಷಾ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಶಿರ್ತಾಡಿಯ ಆಟೋರಿಕ್ಷಾ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿಯುಂಟಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಎರಡು ವಾಹನಗಳ ನಡುವೆ ಸಿಲುಕಿದ್ದು, ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹವನ್ನು ವಾಹನದಿಂದ ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.

Also Read  ಜವಾಹರ ನವೋದಯ ವಿದ್ಯಾಲಯ ➤ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

error: Content is protected !!
Scroll to Top