ಕಬಕದಲ್ಲಿ ಚಿನ್ನಾಭರಣ ಕಳ್ಳತನ ➤ 24 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 15. ಕಬಕದ ಮನೆಯೊಂದರಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ 24 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಕಬಕ ವಿದ್ಯಾಪುರ ನಿವಾಸಿ ಸಂಸೀರ್(23) ಹಾಗೂ ಮುಬಾರಕ್ (26) ಎಂದು ಗುರುತಿಸಲಾಗಿದೆ. ಉರಿಮಜಲು ನಿವಾಸಿ ಮೊಹಮ್ಮದ್ ನೌಫಲ್ ಅವರ ಪತ್ನಿ ರಝೀನ ಎಂಬವರು ಜ. 7 ರಂದು ಕಬಕದ ತನ್ನ ತಂದೆ ಮನೆಗೆ ಬಂದಿದ್ದು, ಚಿನ್ನವನ್ನು ಬೀರುವಿನಲ್ಲಿಟ್ಟಿದ್ದರು. ಆದರೆ ಜ. 10ರಂದು ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಇಪ್ಪತ್ತನಾಲ್ಕು ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ.

Also Read  ಕಡಬ: ಪ್ರಾಚೀನ ಮಣ್ಣಿನ ಪರಿಕರಗಳು ಪತ್ತೆ

error: Content is protected !!
Scroll to Top