ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು ➤ ತಾಯಿ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ.15. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಿದ್ದ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮೃತರನ್ನು ಮಡಿಕೇರಿ ನಿವಾಸಿ ವೆಂಕಟೇಶ್ ಎಂಬವರ ಪತ್ನಿ ಬಬಿತಾ ಹಾಗೂ ಪುತ್ರಿ ಪಲ್ಲವಿ ಎಂದು ಗುರುತಿಸಲಾಗಿದೆ. ವೆಂಕಟೇಶ್ ತನ್ನ ಕುಟುಂಬದೊಂದಿಗೆ ಕುಶಾಲನಗರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಮಡಿಕೇರಿ ಸಮೀಪದ ಬಾಳೆಕಾಡು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕೆರೆಗೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ವೆಂಕಟೇಶ್ ಈಜಿ ದಡ ಸೇರಿದ್ದು, ಪತ್ನಿ ಮತ್ತು ಪುತ್ರಿ ಅಸುನೀಗಿದ್ದಾರೆ‌. ಮಡಿಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top