(ನ್ಯೂಸ್ ಕಡಬ) newskadaba.com ಶಂಕರನಾರಾಯಣ, ಜ. 15. ಹಾವು ಕಚ್ಚಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕುಂದಾಪುರದ ಹೆಂಗವಳ್ಳಿಯಲ್ಲಿ ನಡೆದಿದೆ.

ಮೃತರನ್ನು ಮುಹಮ್ಮದ್ ಆಲಂ ಎಂದು ಗುರುತಿಸಲಾಗಿದೆ. ಹೆಂಗವಳ್ಳಿ ನಿವಾಸಿಯೋರ್ವರ ಮನೆ ಸಮೀಪ ಹಾವನ್ನು ಹಿಡಿಯುತ್ತಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆನ್ನಲಾಗಿದೆ.









