ಜ. 17: ದ.ಕ ಜಿಲ್ಲಾ ಗೃಹರಕ್ಷಕ ದಳ, ಪೌರ ರಕ್ಷಣಾ ಪಡೆ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಮತ್ತು ಮಾನವ ಹಕ್ಕುಗಳ ಮಹಾಮೈತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ‘ಪ್ರಸಾದ್ ನೇತ್ರಾಲಯ’ ಇದರ ಸಹಕಾರದೊಂದಿಗೆ ನೇತ್ರ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 15. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರ ರಕ್ಷಣಾ ಪಡೆ  ಹಾಗೂ  ಲಯನ್ಸ್ ಕ್ಲಬ್ ಮಂಗಳೂರು ಮತ್ತು ಮಾನವ ಹಕ್ಕುಗಳ ಮಹಾಮೈತ್ರಿ (Human Rights Federation of India) ಇದರ ಸಂಯುಕ್ತ ಆಶ್ರಯದಲ್ಲಿ  ‘ಪ್ರಸಾದ್ ನೇತ್ರಾಲಯ’ ಇದರ ಸಹಕಾರದೊಂದಿಗೆ (ಜ. 17) ಭಾನುವಾರದಂದು ಗೃಹರಕ್ಷಕ ದಳ ಕಛೇರಿ, ಮೇರಿಹಿಲ್, ಮಂಗಳೂರು ಇಲ್ಲಿ  ಬೆಳಗ್ಗೆ 9.30 ರಿಂದ 1.30 ರವರೆಗೆ ನೇತ್ರ ತಪಾಸಣಾ ಶಿಬಿರ ಮತ್ತು ನೇತ್ರದಾನ ಅಭಿಯಾನ ನಡೆಯಲಿರುವುದು. 

ಈ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ|| ಭರತ್ ಶೆಟ್ಟಿ ವೈ. ಮಾನ್ಯ ಗೌರವಾನ್ವಿತ ಶಾಸಕರು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಇವರು ವಹಿಸಲಿದ್ದಾರೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲಯನ್ ಉಮೇಶ್ ಪ್ರಭು, ಪ್ರಾಂತೀಯ ಅಧ್ಯಕ್ಷರು, ಕೃಷ್ಣಾನಂದ ಪೈ, ಅಧ್ಯಕ್ಷರು, ಲಯನ್ಸ್ ಕ್ಲಬ್, ಮಂಗಳೂರು, ಪ್ರಸನ್ನಕುಮಾರ್, ಅಧ್ಯಕ್ಷರು, HRFI ಇವರುಗಳು ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಗೃಹರಕ್ಷಕರು ಮತ್ತು  ಸಾರ್ವಜನಿಕರು ಆಗಮಿಸಿ ನೇತ್ರ ತಪಾಸಣಾ ಶಿಬಿರ ಮತ್ತು ನೇತ್ರದಾನ ಅಭಿಯಾನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ  ಡಾ|| ಮುರಲೀ ಮೋಹನ್ ಚೂಂತಾರು ರವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Also Read  ಮೂಡಬಿದಿರೆ : ಗೋಕಳ್ಳರ ಮೇಲೆ ಇಂದು ಬೆಳ್ಳಂಬೇಳಗ್ಗೆ ಶೂಟೌಟ್

error: Content is protected !!
Scroll to Top