ಮಾರಕಾಸ್ತ್ರಗಳಿಂದ ಕೊಚ್ಚಿ ಸಹೋದರರಿಬ್ಬರ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ, ಜ. 15. ಹಳೆ ವೈಷಮ್ಯದ ಕಾರಣ ಇಬ್ಬರು ಸಹೋದರರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ತಡಕಲ್ ಎಂಬಲ್ಲಿ ನಡೆದಿದೆ.

ಮೃತರನ್ನು ನಿಲೇಶ್(39) ಹಾಗೂ ರಾಜಶೇಖರ (35) ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಆರೋಪಿಗಳು ಪರಾರಿಯಾಗಿದ್ದು, ಕೊಲೆಗೆ ಹಳೆ ವೈಷಮ್ಯವೇ ಕಾರಣವೆಂದು ಶಂಕಿಸಲಾಗಿದೆ. ಸದ್ಯ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Scroll to Top