➤➤Breaking News? ಉಳ್ಳಾಲ: ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆತಂದ ಕಾರು ಚಾಲಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 15. ಉಳ್ಳಾಲ ಸಮ್ಮರ್ ಸ್ಟ್ಯಾಂಡ್ ಬೀಚ್ ರೆಸಾರ್ಟ್ ಗೆಂದು ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರ ಕಾರಿನ ಚಾಲಕ ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ನಾಗರಾಜ್ (31) ಎಂದು ಗುರುತಿಸಲಾಗಿದೆ. ಈತ ಕ್ಯಾಬ್ ಚಾಲಕನಾಗಿದ್ದು, ಇಂದು ಮಧ್ಯಾಹ್ನ ಬೆಂಗಳೂರಿನಿಂದ ಪ್ರವಾಸಿಗರನ್ನು ಉಳ್ಳಾಲದ ಸಮ್ಮರ್ ಸ್ಟ್ಯಾಂಡ್ ಬೀಚ್ ಗೆ ಕರೆದುಕೊಂಡು ಬಂದಿದ್ದರೆನ್ನಲಾಗಿದೆ. ಇವರು ಸಮುದ್ರಕ್ಕಿಳಿದು ಆಟವಾಡುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top